ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ

Date:

ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ

ಹೇಮಂತ್ ರಾವ್ ನಿರ್ಮಾಣದ ಅಜ್ಞಾತವಾಸಿ ಸಿನಿಮಾದ ಮೆಲೋಡಿ ಗೀತೆ ಅನಾವರಣ

ನಿರ್ದೇಶಕ ಹೇಮಂತ್ ರಾವ್ ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ಅಜ್ಞಾತವಾಸಿ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಈ ಚಿತ್ರದ ಮೆಲೋಡಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ನಗುವಿನ ನೇಸರ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುನಿಧಿ ಗಣೇಶ್ ಧ್ವನಿಯಾಗಿದ್ದು, ಚರಣ್ ರಾಜ್ ಟ್ಯೂನ್ ಹಾಕಿದ್ದಾರೆ. ನಗುವಿನ ನೇಸರ ಹಾಡಿನಲ್ಲಿ ಪವನಾ ಗೌಡ ಮಿಂಚಿದ್ದಾರೆ.

ಅಜ್ಞಾತವಾಸಿ ಚಿತ್ರಕ್ಕೆ ‘ಗುಳ್ಟು’ ಸಾರಥಿ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಟೀಸರ್ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು, ಈಗ ಹಾಡುಗಳ ಸರದಿ. ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ.

ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...