ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಜುಲೈ 31ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು.
55 ಅಂಗನವಾಡಿ ಕಾರ್ಯಕರ್ತೆ ಹಾಗೂ 276 ಜನ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್. ಎಸ್. ಎಲ್. ಸಿ. ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಆಸಕ್ತರು ಜುಲೈ 31ರ ಸಂಜೆ 5.30ರೊಳಗೆ ಅರ್ಜಿ ಹಾಕಬೇಕು.
ಅಫಜಲಪುರ, ಅಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ (ಗ್ರಾಮೀಣ), ಕಲಬುರಗಿ (ನಗರ), ಜೇವರ್ಗಿ, ಸೇಡಂ ಹಾಗೂ ಶಹಾಬಾದ ಈ 9 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ www.anganwadirecruit.kar.nic.in