“ಅಂಗಾಗ ಪ್ರದರ್ಶಿಸಿ ಕಾಲೇಜಿಗೆ ಬರೋದ”

Date:

ಡೆಹರಾಡೂನ್: ಸಿಎಂ ಪಟ್ಟಕ್ಕೇರಿದಾಗಿನಿಂದಲೂ ಉತ್ತರಾಖಂಡದ ಬಿಜೆಪಿ ಮುಖ್ಯಮಂತ್ರಿ ತೀರ್ಥ್ ಸಿಂಗ್ ರಾವತ್ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬುಧವಾರ ರಿಪ್ಪಡ್ ಜೀನ್ಸ್ ಬಗ್ಗೆ ಕಮೆಂಟ್ ಮಾಡಿದ್ದ ಮುಖ್ಯಮಂತ್ರಿಗಳ ಮತ್ತೊಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಮಹಿಳೆಯರು ಧರಿಸುವ ಕಟ್ ಡ್ರೆಸ್ ಅಥವಾ ಶಾರ್ಟ್ಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವ ಮಹಿಳೆಯರು, ಮುಖ್ಯಮಂತ್ರಿಗಳ ತಮ್ಮ ಆಲೋಚನೆ ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ವೀಡಿಯೋದಲ್ಲಿ ಏನಿದೆ?:
ನಾನು ಶ್ರೀನಗರದಲ್ಲಿ ಓದುತ್ತಿರುವಾಗ ಚಂಡಿಗಢನಿಂದ ಓರ್ವ ಯುವತಿ ಬಂದಿದ್ದಳು. ಶ್ರೀನಗರದವರೇ ಆಗಿದ್ರೂ ಚಂಡೀಗಢನಿಂದ ಬಂದಿದ್ದರಿಂದ ಯುವತಿಯ ಉಡುಗೆ ಭಿನ್ನವಾಗಿತ್ತು. ಅದಕ್ಕೇ ಏನಂತಾರೆ ಅಂದ್ರೆ ಕಟ್ ಡ್ರೆಸ್ ಅಲ್ವಾ? ನಾವು ಆಕೆಯನ್ನ ಹಾಸ್ಯ ಮಾಡುತ್ತಿದ್ದೇವೆ. ಕಾರಣ ಎಲ್ಲ ಹುಡುಗರು ಆಕೆ ಹಿಂದೆಯೇ ತಿರುಗುತ್ತಿದ್ರು. ಯುನಿವರ್ಸಿಟಿಗೆ ಓದೋದಕ್ಕೆ ಬರೋದಾ ಅಥವಾ ಅಂಗಾಂಗ ಪ್ರದರ್ಶನಕ್ಕೆ ಬರೋದಾ ಎಂದು ತೀರ್ಥ್ ಸಿಂಗ್ ವೀಡಿಯೋದಲ್ಲಿ ಪ್ರಶ್ನೆ ಮಾಡಿದ್ದಾರೆ.

ಹರಿದ ಜೀನ್ಸ್ ಹೇಳಿಕೆ ಬೆನ್ನಲ್ಲೇ ಈ ವೀಡಿಯೋ ವೈರಲ್ ಆಗಿದೆ. ವಿಪಕ್ಷಗಳು ಸೇರಿದಂತೆ ಸಿಎಂ ಹೇಳಿಕೆಯನ್ನ ಅಸ್ತ್ರವಾಗಿ ಬಳಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದ್ರೆ ಈ ವೀಡಿಯೋ ಎಲ್ಲಿಯದ್ದು ಮತ್ತು ಯಾವಾಗ ತೀರ್ಥ್ ಸಿಂಗ್ ಹೇಳಿಕೆ ನೀಡಿದ್ದು ಎಂಬುದರ ಬಗ್ಗೆ ವರದಿಯಾಗಿಲ್ಲ.

ಹರಿದ ಜೀನ್ಸ್ ಧರಿಸೋದು ಯಾವ ಸಂಸ್ಕೃತಿ?: ಬುಧವಾರ ಮಕ್ಕಳ ಹಕ್ಕು ಮತ್ತು ಸಂರಕ್ಷಣಾ ಆಯೋಗದ ಕಚೇರಿ ಉದ್ಘಾಟಿಸಿ ಮಾತನಾಡಿದ್ದ ಸಿಎಂ, ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ? ಹರಿದ ಜೀನ್ಸ್ ಧರಿಸುವಿಕೆ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ. ಈ ಜೀವನಶೈಲಿ ಪೋಷಕರ ಮೇಲೆ ನಿರ್ಧರಿತವಾಗಿರುತ್ತೆ ಎಂದು ಹೇಳಿದ್ದರು.

ಒಂದು ದಿನ ವಿಮಾನಯಾನ ಮಾಡುವಾಗ ಮಹಿಳೆ ಇಬ್ಬರು ಮಕ್ಕಳ ಜೊತೆ ಬಂದು ಪಕ್ಕದಲ್ಲಿ ಕುಳಿತರು. ಮಹಿಳೆ ಹರಿದ ಜೀನ್ಸ್ ಧರಿಸಿದ್ದರು. ಸೋದರಿ ಎಲ್ಲಿಗೆ ಹೋಗ್ತೀದ್ದೀರಾ ಅಂತ ಕೇಳಿದಾಗ ಮಹಿಳೆ ತಮ್ಮ ಕಿರು ಪರಿಚಯ ಮಾಡಿಕೊಂಡರು. ಪತಿ ಜೆಎನ್‍ಯುನಲ್ಲಿ ಉಪನ್ಯಾಸಕರಾಗಿದ್ದು, ತಾನು ಎನ್‍ಜಿಓ ನಡೆಸುತ್ತಿರೋದಾಗಿ ತಿಳಿಸಿದರು. ಹರಿದ ಜೀನ್ಸ್ ಧರಿಸಿದ ಮಹಿಳೆ ಎನ್‍ಜಿಓ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ. ನಮ್ಮ ಶಾಲಾ ದಿನಗಳಲ್ಲಿ ಈ ರೀತಿಯ ಜೀವನ ಶೈಲಿ ಇರಲಿಲ್ಲ ಎಂದು ಹೇಳಿದ್ದರು.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...