ಅಂಚೆ ಇಲಾಖೆಯಲ್ಲಿ ಕೆಲಸ ಖಾಲಿ; ನೇರ ಸಂದರ್ಶನ

0
110

ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.


ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ರಿಂದ 50 ವರ್ಷದೊಳಗಿನವರಾಗಿರಬೇಕು.
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಸೇರಿದಂತೆ ಯಾವುದೇ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಅವರಿಗೆ ಅವಕಾಶ ನೀಡಲಾಗುತ್ತದೆ.


ಆಯ್ಕೆಯಾದ ಅಭ್ಯರ್ಥಿಗಳು ರೂ. 5000ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ನೀಡಬೇಕಾಗುತ್ತದೆ.
ಆಯ್ಕೆಯಾದ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ಸೂಕ್ತ ಕಮೀಷನ್ ನೀಡಲಾಗುತ್ತದೆ. ನಿಗದಿತ ವೇತನ ಇರುವುದಿಲ್ಲ ಹಾಗೂ ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳಲ್ಲಿ ಏಜೆಂಟ್ ಆಗಿರಬಾರದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.
ನೇರ ಸಂದರ್ಶನ ನಡೆಯುವ ವಿಳಾಸ; ಕೆ. ಸಿ. ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯ.

LEAVE A REPLY

Please enter your comment!
Please enter your name here