ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: 8 ದಿನ ಆರೋಪಿ ವಿಶ್ವ ಸಿಐಡಿ ವಶಕ್ಕೆ

0
23

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ನ್ಯಾಯಾಧೀಶರ ಮುಂದೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. ಹುಬ್ಬಳ್ಳಿಯ ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಲಯದಲ್ಲಿ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದ ಸಂದರ್ಭದಲ್ಲಿ ವಿಶ್ವ ಕಣ್ಣೀರು ಹಾಕಿದ್ದಾನೆ.
ಇದೇ ಸಂದರ್ಭದಲ್ಲಿ ಆತನನ್ನು 15 ದಿನ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೇಳಿಕೊಂಡರು. ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ನಾಯ್ಕ್ 8 ದಿನಗಳವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶ ನೀಡಿದರು. ಕಸ್ಟಡಿಗೆ ನೀಡುತ್ತಿದ್ದಂತೆ ಮತ್ತೆ ಬೆಂಡಿಗೇರಿ ಪೊಲೀಸ್ ಠಾಣೆಗೆ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದರು. ಬಳಿಕ ಸ್ಥಳ ಮಹಜರು ಮಾಡಲಿದ್ದಾರೆ.