ಅಂಜಲಿ ಹತ್ಯೆ ಪ್ರಕರಣ: ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ !

Date:

ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸ ಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ.
ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಕೊಲೆಯಾದ ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ, ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು, ಪೊಲೀಸರಿಗೆ ಮೊದಲೆ ಮಾಹಿತಿ ನೀಡಿದ್ದೇವು ಅಂತ ಅಂದಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಎಸ್ಐಟಿ ವರದಿ ಮಂಡ್ಯ ಶಾಸಕರಿಗೆ ಸಿಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣ ಇನ್ನೂ ತನಿಖೆ ಆಗುತ್ತಿದೆ. ಅನೇಕ ವಿಚಾರವನ್ನು ಸಾರ್ವಜನಿಕಗೊಳಿಸುವಂತಿಲ್ಲ. ಮಂಡ್ಯ ಶಾಸಕರಿಗೆ ಯಾರು ಮಾಹಿತಿ ನೀಡುತ್ತಾರೆ? ಆರೋಪ ಸುಲಭ, ಆದರೆ ನಾವು ಯಾವ ಮುಲಾಜಿಗೆ ಒಳಪಡಲ್ಲ. ಎಸ್ಟಿಐ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ, ಸಿಎಂಗೆ ಯಾವ ಮಾಹಿತಿ ಕೊಡಬೇಕು ಕೊಡುತ್ತಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ ಬೆಂಗಳೂರು:...