ಅಂತೂ ಗೆದ್ರು ಸನ್ ರೈಸರ್ಸ್ ಹೈದರಾಬಾದ್

Date:

 

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 14ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ( ಏಪ್ರಿಲ್ 21 ) ನಡೆಯಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್‌ಗಳಲ್ಲಿ 120 ರನ್‌ಗಳಿಗೆ ಆಲ್ಔಟ್ ಆಯಿತು. ಪಂಜಾಬ್ ಕಿಂಗ್ಸ್ ತಂಡದ ಪರ ಯಾವೊಬ್ಬ ಆಟಗಾರನೂ ಸಹ ಉತ್ತಮ ಇನ್ನಿಂಗ್ಸ್ ಕಟ್ಟುವ ಆಟವನ್ನು ಆಡಲೇ ಇಲ್ಲ. ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಗೆ ಪಂಜಾಬ್ ತಂಡದ ಆಟಗಾರರು ಅಕ್ಷರಸಹ ತತ್ತರಿಸಿದರು. ಪಂಜಾಬ್ ತಂಡದ ಪರ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಆಟವನ್ನಾಡುವ ಪ್ರಯತ್ನವನ್ನು ಪಟ್ಟರು ಸಹ 22 ರನ್ ಗಳಿಸಿ ನಿರ್ಗಮಿಸಿದರು. ಪಂಜಾಬ್ ತಂಡದ ಶಾರುಖ್ ಖಾನ್ ಕೊನೆಯ ಹಂತದಲ್ಲಿ 2 ಸಿಕ್ಸರ್ ಬಾರಿಸಿ ಗಮನ ಸೆಳೆದರು. ಕಳೆದ 3 ಪಂದ್ಯಗಳಲ್ಲಿ ಮಂಕಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರಾದ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ 2 ವಿಕೆಟ್ ಮತ್ತು ಖಲೀಲ್ ಅಹ್ಮದ್ 3 ವಿಕೆಟ್ ಪಡೆದು ಮಿಂಚಿದರು.

121 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಡೇವಿಡ್ ವಾರ್ನರ್ ಮತ್ತು ಜಾನಿ ಬೈರ್‌ಸ್ಟೋವ್ ಉತ್ತಮ ಆರಂಭವನ್ನು ನೀಡಿದರು. 73 ರನ್‌ಗಳ ಜತೆಯಾಟವಾಡಿದ ಈ ಜೋಡಿ ಆರಂಭದಿಂದಲೇ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಶುರುಮಾಡಿದರು. ಡೇವಿಡ್ ವಾರ್ನರ್ 37 (37) ರನ್ ಗಳಿಸಿ ಫ್ಯಾಬಿಯನ್ ಅಲೆನ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ವಿಲಿಯಮ್ಸನ್ ಜತೆಗೂಡಿದ ಜಾನಿ ಬೈರ್‌ಸ್ಟೋವ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನ ಗುರಿ ತಲುಪಿಸಿದರು.

 

 

ಸತತ 3 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಲ್ಕನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್‍ಗಳ ಜಯಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. 18.4 ಓವರ್‌ಗಳಲ್ಲಿ ಗುರಿ ಮುಟ್ಟಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ವಾರ್ನರ್‌ 37 (37), ಜಾನಿ ಬೈರ್‌ಸ್ಟೋವ್ 63 (56) ಹಾಗೂ ಕೇನ್ ವಿಲಿಯಮ್ಸನ್ 16 (19) ರನ್ ಗಳಿಸಿದರು. ಇತ್ತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...