No menu items!
13.9 C
Munich
Wednesday, April 29, 2026

ಅಂಬರೀಶ್ ಪುಣ್ಯತಿಥಿ; ‘ಅಪ್ಪಾಜಿ’ ನೆನೆದ ದರ್ಶನ್

Must read

ಕನ್ನಡದ ಖ್ಯಾತ ನಟ, ರಾಜಕಾರಣಿ, ಮಂಡ್ಯದ ಗಂಡು ಖ್ಯಾತಿಯ ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.

ಅಪ್ಪಾಜಿ ನೆನಪಿಸಿಕೊಂಡ ದರ್ಶನ್
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಎಂದು ಚಾಲೇಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.

https://youtu.be/M_U_Ra0i7_E

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article