ಸರ್ಕಾರ ನಡೆಸಿದವರು ಬಡವರಿಗೆ ಉಚಿತವಾಗಿ ನೀಡಿದ್ದು ತಾವೇ ಎಂದು ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ನಾವೇ ಆ ಯೋಜನೆ ಜಾರಿಗೆ ತಂದಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಅಕ್ಕಿ ನೀಡುವ ಯೋಜನೆಯನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಗರೀಬಿ ಹಟಾವೋ ಜಾರಿಗೊಳಿಸಿ ಮೊದಲ ಬಾರಿಗೆ ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಮೂಲಕ ಇಂದಿರಾಗಾಂಧಿ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಇತ್ತೀಚಿನ ಸರ್ಕಾರಗಳಲ್ಲಿ ಅಧಿಕಾರ ನಡೆಸಿದವರು ತಾವೇ ಅಕ್ಕಿ ನೀಡಿದ್ದಾಗಿ ಹೇಳಿಕೊಳ್ಳುತ್ತಾರೆ ಎಂದು ಪರಮೇಶ್ವರ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.