No menu items!
11.1 C
Munich
Wednesday, April 29, 2026

ಅಕ್ಟೋಬರ್ 3ರವರೆಗೂ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

Must read

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದಲ್ಲಿ ಮತ್ತೆ ಮಳೆಯಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ತನಕ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಮುಂಗಾರು ಚುರುಕುಗೊಂಡ ಪ್ರಭಾವ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article