ಅಕ್ಟೋಬರ್ 4ರವರೆಗೆ ರಾಜ್ಯದ ಈ ಪ್ರದೇಶಗಳಲ್ಲಿ ಭಾರೀ ಮಳೆ

0
40

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 2 ರಿಂದ 4ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಚಿತ್ರದುರ್ಗ, ದಾವಣಗೆರೆ, ಹಾಸನ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

ಗೋವಾ, ಗುಜರಾತ್, ಮಧ್ಯ ಮಹಾರಾಷ್ಟ್ರ, ಕೊಂಕಣ, ಪಶ್ಚಿಮ ಬಂಗಾಳ, ಒರಿಸ್ಸಾ, ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್​ಗಢ, ಜಾರ್ಖಂಡ್, ಆಂಧ್ರಪ್ರದೇಶದ ಕರಾವಳಿ ತೀರ, ತೆಲಂಗಾಣ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಅಂಡಮಾನ್ ನಿಕೋಬಾರ್, ತ್ರಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಬಿಹಾರ, ಉತ್ತರಾಖಂಡ, ರಾಜಸ್ಥಾನ, ಹರಿಯಾಣ, ತಮಿಳುನಾಡು, ಪುದುಚೆರಿ, ಕೇರಳ, ಮಾಹೆಯಲ್ಲಿ ಇಂದು ಅತ್ಯಂತ ಹೆಚ್ಚು ಮಳೆಯಾಗಲಿದೆ.

ಎರಡು ದಿನಗಳಲ್ಲಿ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯುವ ಸಾಧ್ಯತೆಯಿದೆ. ಈ ಶಾಹೀನ್ ಚಂಡಮಾರುತದ ಹೆಸರನ್ನು ಕತಾರ್ ನೀಡಿದೆ. ಗುಲಾಬ್ ಚಂಡಮಾರುತದ ಅಬ್ಬರ ತೆಲಂಗಾಣ, ಮರಾಠವಾಡ, ವಿದರ್ಭದಲ್ಲಿ ಕಡಿಮೆಯಾಗುತ್ತಿದೆ.

 

 

LEAVE A REPLY

Please enter your comment!
Please enter your name here