ಅಕ್ಟೋಬರ್ 5ರಿಂದ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

0
49

ರಾಜ್ಯದಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ತುಮಕೂರಿನಲ್ಲೂ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಕೆಲ ಭಾಗ ಮತ್ತು ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಉತ್ತಮ ಮಳೆ ಸುರಿದಿದ್ದು, ಗದಗ ಜಿಲ್ಲೆ ರೋಣ ತಾಲೂಕಿನಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬಳು ಮೃತಳಾಗಿದ್ದಾಳೆ. ಇನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಧಾರವಾಡ, ಕಲಘಟಗಿ, ಹಾವೇರಿ ಜಿಲ್ಲೆಯ ಹಾವೇರಿ, ಹಾನಗಲ್‌, ಹಿರೇಕೆರೂರು, ಶಿಗ್ಗಾಂವಿ, ಸವಣೂರು, ಗದಗ ಜಿಲ್ಲೆಯ ಗದಗ, ರೋಣ, ಗಜೇಂದ್ಗಡ, ಶಿರಹಟ್ಟಿ, ಲಕ್ಷ್ಮೇಶ್ವರದಲ್ಲೂ ಗುಡುಗು ಸಹಿತ ಮಳೆ ಸುರಿದಿದೆ. ಕೊಡಗಿನ ಕೇಂದ್ರ ಮಡಿಕೇರಿ ಸೇರಿದಂತೆ ಸೋಮವಾರಪೇಟೆ, ಸುಂಟಿಕೊಪ್ಪ, ಕುಶಾಲನಗರ, ಚೆಟ್ಟಳ್ಳಿ, ಮಾದಾಪುರ, ಕಗ್ಗೋಡ್ಲು, ಮರಗೋಡು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಸುರಿಯಿತು.

LEAVE A REPLY

Please enter your comment!
Please enter your name here