ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

Date:

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಚಿಕ್ಕಮಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರ ನಿವಾಸದ ಮೇಲೆ ಲೋಕಾಯುಕ್ತರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ದಾಖಲಾದ ಎಫ್‌ಐಆರ್ ನಂತರ ಲೋಕಾಯುಕ್ತ ತನಿಖೆ ತೀವ್ರಗೊಂಡಿದ್ದು, ಶಾಸಕರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡದ ದೂರು ನೀಡಲಾಗಿತ್ತು.

ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು.  ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜೇಗೌಡರ ನಿವಾಸ ಬಸಾಪುರದ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...