No menu items!
20.3 C
Munich
Monday, June 15, 2026

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

Must read

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

ಶಾಸಕ ಸತೀಶ್ ಸೈಲ್ ಅವರಿಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಲಿವರ್ ಕಸಿ ಸಂಬಂಧಿಸಿದಂತೆ ಪ್ರತಿ ಎರಡು ವಾರಗಳಿಗೊಮ್ಮೆ ವರದಿ ಸಲ್ಲಿಸಬೇಕು. ಜೊತೆಗೆ, ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ, ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವಂತಿಲ್ಲ. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತೊಂದರೆ ಉಂಟುಮಾಡಬಾರದು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಜಾಮೀನು ಮಂಜೂರಿಗೆ ಷರತ್ತಾಗಿ ಐದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಬ್ಬ ಭದ್ರತಾ ಖಾತರಿ ಒದಗಿಸುವಂತೆ ಹೈಕೋರ್ಟ್ ಆದೇಶಿಸಿದೆ.

- Advertisement -spot_img

More articles

- Advertisement -spot_img

Latest article