ಅಗತ್ಯ ಸೇವೆಗಳ ಮುಷ್ಕರದ ವಿರುದ್ಧ ಸರ್ಕಾರ ಕಿಡಿ

Date:

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.


ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.
ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಅನ್ವಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.


ಲಾಕ್​ಡೌನ್​ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ‌ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...