ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

Date:

ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

ಸ್ಯಾಂಡಲ್ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿದ್ದು, ಪರಸ್ಪರ ವಿಚ್ಛೇದನ ಕೋರಿ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನ ರಾವ್ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
2014ರ ಡಿಸೆಂಬರ್ 18ರಂದು ಪ್ರೀತಿಸಿ ಮದುವೆಯಾದ ಈ ಜೋಡಿ, ಇತ್ತೀಚೆಗೆ 11 ವರ್ಷಗಳ ದಾಂಪತ್ಯ ಜೀವನದ ಬಳಿಕ ಡಿವೋರ್ಸ್ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ವಿಶೇಷವೆಂದರೆ, ಇತ್ತೀಚೆಗಷ್ಟೇ ಈ ದಂಪತಿ ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಅಜಯ್ ರಾವ್ ಮತ್ತು ಸ್ವಪ್ನರ ಮದುವೆ ಲವ್ ಕಂ ಅರೇಂಜ್ ಮ್ಯಾರೇಜ್ ಆಗಿದ್ದು, ಪರಿಚಯ ಸ್ನೇಹಕ್ಕೆ, ಸ್ನೇಹ ಪ್ರೀತಿಗೆ ತಿರುಗಿ ನಂತರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಈ ದಂಪತಿಗೆ ಒಬ್ಬ ಮುದ್ದಾದ ಮಗಳು ಇದ್ದಾಳೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...