ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Date:

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರ್ಮರಣ ಆಘಾತಕಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ತಮಗೂ ಗಾಬರಿಯಾಯಿತು ಎಂದು ಹೇಳಿದ್ದಾರೆ.

ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ಅಜಿತ್ ಪವಾರ್ ಅವರ ಸಾವು ಅತ್ಯಂತ ದುಃಖಕರ. ಈ ಸುದ್ದಿ ಕೇಳಿ ನನಗೂ ಆಘಾತವಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ವಿಶೇಷ ಜಾಗ್ರತೆ ಅಗತ್ಯ. ಈ ರೀತಿಯಾಗಿ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ,” ಎಂದು ಹೇಳಿದರು.

ಅಜಿತ್ ಪವಾರ್ ಅವರನ್ನು ಸ್ಮರಿಸಿದ ಅವರು, “ಅವರು ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದ ನಾಯಕ. ಎಲ್ಲಾ ಕೆಲಸಗಳಿಗೂ ಉತ್ತಮ ಸಹಕಾರ ನೀಡುತ್ತಿದ್ದರು ಎಂದು ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,” ಎಂದು ಸಂತಾಪ ಸೂಚಿಸಿದರು.

ಅಜಿತ್ ಪವಾರ್ ಅವರ ಕುಟುಂಬದ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರವೇ ನಾನು ಅವರ ಕೆಲ ಸಂಬಂಧಿಕರನ್ನು ಭೇಟಿಯಾಗಿದ್ದೆ,” ಎಂದು ಹೇಳಿದರು.

ಅಜಿತ್ ಪವಾರ್ ಅವರ ರಾಜಕೀಯ ಜೀವನದ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರು ಪ್ರಸ್ತುತ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು,” ಎಂದು ತಿಳಿಸಿದರು.

ಇತ್ತೀಚೆಗೆ ಸಂಭವಿಸುತ್ತಿರುವ ವಿಮಾನ ಅಪಘಾತಗಳು ಹಾಗೂ ತಾಂತ್ರಿಕ ದೋಷಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ಈ ಕುರಿತು ವಿಸ್ತೃತ ವರದಿ ಬಂದ ನಂತರವೇ ಮಾತನಾಡುತ್ತೇನೆ. ತಾಂತ್ರಿಕ ದೋಷದ ಬಗ್ಗೆ ನನಗೆ ಈಗಷ್ಟೇ ಏನೂ ತಿಳಿದಿಲ್ಲ. ಮುಂಬೈನಲ್ಲಿರುವ ಗೆಳೆಯರು ಸೇರಿದಂತೆ ಹಲವರು ಈ ವಿಷಯವನ್ನು ತಿಳಿಸಿದ್ದಾರೆ,” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್...

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ‘ಗಾಂಧಾರಿ’...