ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು

Date:

*’ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು*

ಪೇಟಾ’ಸ್ ಸಿನಿ ಕೆಫೆ ಮತ್ತು ಫಿಲ್ಮಿ ಮಾಂಕ್ ಸಹಯೋಗದೊಂದಿಗೆ ಕಿರಾತಕ ಪ್ರದೀಪ್ ರಾಜ್, ಪಿ ಸಿ ಶೇಖರ್, ಪ್ರಶಾಂತ್ ರಾಜಪ್ಪ ನಿರ್ದೇಶನ ತಂಡದಲ್ಲಿ ಕೆಲಸ ಮಾಡಿದ ಅನುಭವ ಇರುವ ವಿಶ್ವ ನಿರ್ದೇಶನದ ಚೊಚ್ಚಲ ಚಿತ್ರ ‘ಅಣ್ತಮ್ತನ’ ಘೋಷಣೆ ಆಗಿದೆ.

ಈ ಚಿತ್ರದಲ್ಲಿ ಬಹುಭಾಷಾ ನಟ ಅಚ್ಯುತ್ ಕುಮಾರ್ ಮತ್ತು ಬಹುಬೇಡಿಕೆಯ ನಟ ಗೋಪಾಲಕೃಷ್ಣ ದೇಶಪಾಂಡೆ ಅಣ್ಣ ತಮ್ಮಂದಿರಾಗಿ ಮುಖ್ಯಭೂಮಿಕೆಯಲ್ಲಿ ಮತ್ತು ಒಂದ್ ಕಥೆ ಹೇಳ್ಲಾ ಹಾಗೂ ಶಾಲಿವಾಹನ ಶಕೆ ಖ್ಯಾತಿಯ ಗಿರೀಶ್ ಜಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ ಪೂರ್ಣಚಂದ್ರ ತೇಜಸ್ವಿ ಎಸ್ ವಿ ಅವರ ಸಂಗೀತ, ಶೈಲೇಶ್ ಕುಮಾರ್ ಸಂಭಾಷಣೆ, ಹರಿ ಪರಾಕ್ ಸಾಹಿತ್ಯ ಇರುವ ಚಿತ್ರ ಅಣ್ತಮ್ತನ.

ಈ ಚಿತ್ರ ಅಣ್ಣ ತಮ್ಮ ಸಂಬಂಧ, ನಮ್ಮ ಮಣ್ಣಿನ ಆಚರಣೆ, ಹಳೆ ಮೈಸೂರು ಸಂಸ್ಕೃತಿ, ನಂಬಿಕೆ ಮೂಢನಂಬಿಕೆಗಳ ಸುತ್ತ ಹೆಣೆದಿರುವ ಕಥೆ ಹೊಂದಿದೆ.

ಆದಿಚುಂಚನಗಿರಿ, ನಾಗಮಂಗಲ, ಮದ್ದೂರು, ಮಂಡ್ಯ ಸುತ್ತ-ಮುತ್ತ ಚಿತ್ರೀಕರಣ ನಡೆಯಲಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...