ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ. ಸೋಮವಾರ ಸಂಜೆಯ ವೇಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ. ಜಲಾಶಯದ ಪೂರ್ಣಮಟ್ಟ 124 ಅಡಿಗಳು.
ಕೆಆರ್‌ಎಸ್ ಜಲಾಶಯ ಭರ್ತಿಯಾಗಲು 4.34 ಅಡಿ ಮಾತ್ರವೇ ಬಾಕಿ ಉಳಿದಿದೆ. ಜಲಾಶಯಕ್ಕೆ 13,108 ಕ್ಯುಸೆಕ್ ಒಳಹರಿವು ಇದೆ. 5505 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯ ಭರ್ತಿಯಾದ ಬಳಿಕ ಮುಖ್ಯಮಂತ್ರಿಗಳು ಬಾಗಿನ ಅರ್ಪಣೆ ಮಾಡಲಿದ್ದಾರೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಇಳಿಕೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಸಹ ಮುನ್ಸೂಚನೆ ನೀಡಿದೆ.