ಅತೃಪ್ತ ಶಾಸಕರುಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ಬಹುಮತ ಕಳೆದುಕೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿದೆ. ವಿಶ್ವಾಸಮತ ಯಾಚನೆಗೆ ಹಾಜರಾಗುವಂತೆ ಕಾಂಗ್ರೆಸ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಈ ಶಾಸಕರುಗಳಿಗೆ ವಿಪ್ ನೀಡಿದ್ದರು,
ಹೀಗಾಗಿ ಬೇಸರಗೊಂಡ ದೋಸ್ತಿ ನಾಯಕರು ಅತೃಪ್ತ ಶಾಸಕರುಗಳಿಗೆ ಪಾಠ ಕಲಿಸಲು ಮುಂದಾಗಿದ್ದಾರೆ. ಇವರುಗಳನ್ನು ಅನರ್ಹಗೊಳಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಮುಂದೆ ಮನವಿ ಮಾಡಿದ್ದು,
ವಿಪ್ ಉಲ್ಲಂಘನೆ ಕಾರಣಕ್ಕೆ ರಾಜೀನಾಮೆ ನೀಡಿರುವ ಶಾಸಕರುಗಳು ಒಂದು ವೇಳೆ ಅನರ್ಹಗೊಂಡರೆ ಅಂತಹ ಸಂದರ್ಭದಲ್ಲಿ ಅಸ್ತಿತ್ವಕ್ಕೆ ಬರಲಿರುವ ಬಿಜೆಪಿ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಪಡೆಯುವುದು ಸಾಧ್ಯವಾಗುವುದಿಲ್ಲ.ಉಪ ಚುನಾವಣೆಯಲ್ಲಿ ಗೆದ್ದ ಬಳಿಕವೇ ಮಂತ್ರಿ ಸ್ಥಾನ ಗಿಟ್ಟಿಸಬಹುದೆಂದು ಹೇಳಲಾಗಿದ್ದು, ಸ್ಪೀಕರ್ ಅನರ್ಹಗೊಳಿಸಿದ ಸಂದರ್ಭದಲ್ಲಿ ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವೂ ಇದೆ ಎಂದು ಹೇಳಲಾಗಿದೆ.