ನವದೆಹಲಿ : ತೆಲಂಗಾಣದಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಇಡೀ ದೇಶ ನಡುಗಿದೆ. ಅಮಾನವೀಯ ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ದೇಶದ ಪ್ರತಿಯೊಬ್ಬರೂ ತಮ್ಮದೇಯಾದ ರೀತಿಯಲ್ಲಿ ಖಂಡಿಸುತ್ತಿದ್ದಾರೆ. ಅಂತೆಯೇ ಜಯಾ ಬಚ್ಚನ್ ಕೂಡ ಘಟನೆಗೆ ಕಿಡಿಕಾರಿದ್ದಾರೆ.
ಹೌದು, ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು ಎಂದು ಜಯಾ ಹೇಳಿದ್ದಾರೆ. ಅವರು ನೀಡಿರುವ ಹೇಳಿಕೆ ವಿವಾದಕ್ಕೆ ಒಳಗಾಗಿದೆ.
ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಕುರಿತು ಚರ್ಚೆಯೊಂದರಲ್ಲಿ ಮಾತನಾಡಿದ ಅವರು, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರಕಾರಕ್ಕೆ ಬಹಿರಂಗ ಸಲಹೆ ನೀಡಿದ್ದಾರೆ.
ಜಯಾ ಬಚ್ಚನ್ ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಹಿಂಸಾತ್ಮಕ ಮಾರ್ಗದ ಸಲಹೆ ನೀಡಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸುತ್ತಿದ್ದಾರೆ.
ಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಥಳಿಸಬೇಕು : ಜಯಾ ಬಚ್ಚನ್
Date: