ನಿನ್ನೆ ಹೈದರಾಬಾದ್ ನಲ್ಲಿ ನೆಡೆದ ಅತ್ಯಾಚಾರಿಗಳ ಎನ್ಕೌಂಟರ್ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರ ಪೋಲಿಸ್ ಆಯುಕ್ತರು ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಆರೋಪಿಗಳನ್ನು ಮಹಜರು ಮಾಡಲು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನವಾಗಿದೆ. ಇಂತಹ ವೇಳೆ ಪೋಲಿಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಪೊಲೀಸರು ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಿದ್ದಾರೆ.
ಆರೋಪಿಗಳು ತಪ್ಪಿಸಿಕೊಂಡಿದ್ದರೆ ಪರಿಸ್ಥಿತಿ ಬೇರೆ ರೀತಿ ತಿರುಗುತ್ತಿತ್ತು. ಹಾಗಾಗಿ ಅಲ್ಲಿನ ಪೊಲೀಸರು ಗಂಭೀರ ಕ್ರಮ ಕೈಗೊಂಡಿರುವುದ ಸಮರ್ಥನೀಯ, ಸರಿಯಾದ ನಿರ್ಧಾರ ಕೂಡ ಎಂದ ಬೆಂಗಳೂರು ನಗರ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದರು.