ಅತ್ಯಾಚಾರ ಆರೋಪ: ‘ಕೈ’ ಶಾಸಕ ವಿನಯ್ ಕುಲಕರ್ಣಿ ಮೇಲೆ ದಾಖಲಾಯ್ತು FIR!

Date:

ಅತ್ಯಾಚಾರ ಆರೋಪ: ‘ಕೈ’ ಶಾಸಕ ವಿನಯ್ ಕುಲಕರ್ಣಿ ಮೇಲೆ ದಾಖಲಾಯ್ತು FIR!

ಬೆಂಗಳೂರು:- ಅತ್ಯಾಚಾರ ಆರೋಪದಡಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ FIR ದಾಖಲಾಗಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

2022ರಲ್ಲಿ ಶಾಸಕರನ್ನು ಭೇಟಿ ಮಾಡಿದ್ದೆ. ಬಳಿಕ ರೈತರೊಬ್ಬರಿಂದ ನನ್ನ ಫೋನ್ ಪಡೆದಿದ್ದ ಶಾಸಕರು, ರಾತ್ರಿ ವೇಳೆಯೂ ನನಗೆ ಕರೆ ಮಾಡಲು ಪ್ರಾರಂಭಿಸಿದ್ದರು. ಕೆಲವು ತಿಂಗಳ ನಂತರ, ಬೆತ್ತಲೆಯಾಗಿದ್ದಾಗ ವೀಡಿಯೊ ಕರೆ ಮಾಡುವಂತೆ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ ಶಾಸಕರ ಮನೆಗೆ ಹೋಗದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೌಡಿಗಳ ತಂಡವೊಂದು ಬೆದರಿಕೆ ಹಾಕಿತು.

ಏಪ್ರಿಲ್‌ನಲ್ಲಿ, ಶಾಸಕರು ನನ್ನನ್ನು ಬೆಳಗಾವಿಗೆ ಕರೆದರು, ಅಲ್ಲಿ ನನ್ನನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆದರೆ, ಕೆಲವರು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ತಪ್ಪಿಸಿಕೊಂಡಿದ್ದೆ.

ಆಗಸ್ಟ್ 24 ರಂದು ಕೆಲಸದ ನಿಮಿತ್ತ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಬೆಂಗಳೂರಿಗೆ ಬಂದಿದ್ದೆ. ಆಗ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಸೂಚಿಸಿದ್ದರು. ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ನಡೆಸಿ ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಸುತ್ತೇನೆ ಎಂದು ಆಮಿಷವೊಡ್ಡಿದ್ದರು.

ಬಳಿಕ 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಭೇಟಿ ಮಾಡಿದ್ದರು. ಬಳಿಕ ನನ್ನ ಫೋನ್ ತೆಗೆದುಕೊಂಡು ಅವರ ಪಕ್ಷದ ಸದಸ್ಯನೊಬ್ಬನ ಕೈಗೆ ಇರಿಸಿ ಫೋಟೋ ಹಾಗೂ ವಿಡಿಯೋ ತೆಗೆದುಕೊಳ್ಳುವಂತೆ ತಿಳಿಸಿದ್ದರು. ಬಳಿಕ ಫೋನ್ ನನಗೆ ನೀಡಿದದರು.

ಇದಾದ ಬಳಿಕ ನಾನು ಮತ್ತು ಶಾಸಕರು ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆಯ ಆಡಿಯೋ ವೈರಲ್ ಆಗಿತ್ತು. ಶಾಸಕರು ನಾನೇ ಆಡಿಯೋ ಲೀಕ್ ಮಾಡಿದ್ದೇನೆಂದು ಶಂಕಿಸಿದ್ದರು. ಬಳಿಕ ಅರ್ಜುನ್ ಅವರಿಗೆ ಕರೆ ಮಾಡಿ ಆಡಿಯೋ ಲೀಕ್ ಮಾಡಿದ್ದ ನಾನಲ್ಲ ಎಂದು ಹೇಳಿದ್ದೆ. ಆದರೆ, ಅವರು ನಂಬಲಿಲ್ಲ. ಶಾಸಕರು ನಿರ್ಜನ ಪ್ರದೇಶಕ್ಕೆ ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದರು.

ಅಕ್ಟೋಬರ್ 2 ರಂದು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಶಾಸಕರು ನನ್ನ ಮೇಲೆ ಅತ್ಯಾಚಾರ ಎಸಗಿದರು. ಮರುದಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಯಾರಿಗೂ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದರು. ನಂತರ ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವಂತೆ ಅರ್ಜುನ್ ಅವರಿಗೆ ಸೂಚಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...