No menu items!
28.4 C
Munich
Monday, May 25, 2026

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

Must read

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

 

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್​ನಲ್ಲಿ ಜಾಮೀನು ಪಡೆದಿದ್ದ ಶಾಸಕ ಮುನಿರತ್ನ ನಾಯ್ಡುರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

- Advertisement -spot_img

More articles

- Advertisement -spot_img

Latest article