No menu items!
10.8 C
Munich
Wednesday, September 2, 2026

ಅತ್ಯಾಚಾರ ಪ್ರಕರಣ: ಇಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

Must read

ಅತ್ಯಾಚಾರ ಪ್ರಕರಣ: ಇಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಲಿದೆ. ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದು ತೀರ್ಪು ಕಾಯ್ದಿರಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು.
354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ. ಈ ತೀರ್ಪು ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ಮೇಲೂ ಪ್ರಭಾವ ಬೀರಲಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article