No menu items!
13.8 C
Munich
Friday, July 24, 2026

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

Must read

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

ಬೆಂಗಳೂರು: ಆರ್ಎಂಸಿ ಯಾರ್ಡ್ ಮಹಿಳೆ ಮೇಲೆ ನಡೆದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆಯಿಂದ ಎಸ್ಐಟಿ ಬಿ ತನಿಖಾ ವರದಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಮಹಿಳೆಯು ಆರೋಪಿಸಿದ ಘಟನೆ ಸಂಬಂಧ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳು ದೊರೆತಿಲ್ಲ. ಬಂಧಿಸದಂತೆ ನೀಡಿದ್ದ ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರದ ದೂರು ನೀಡಿದ್ದರು. ಆರ್ಎಂಸಿ ಯಾರ್ಡ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಮಹಿಳೆ ಮಾತ್ರೆ ಸೇವಿಸುವಾಗಲೂ ರಿಹರ್ಸಲ್ ಮಾಡಿರೋದು ಬೆಳಕಿಗೆ ಬಂದಿದೆ. 8 ಬಾರಿ ರಿಹರ್ಸಲ್ ಮಾಡಿದ್ದಳು. ಆಕೆ ದೇಹದಲ್ಲಿ ನಿದ್ರೆ ಮಾತ್ರೆ ಅಂಶ ಇಲ್ಲ. ಮಹಿಳೆ ಮಾಡಿರುವ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹೀಗಾಗಿ, ಕೋರ್ಟ್ಗೆ ಎಸ್ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.

- Advertisement -spot_img

More articles

- Advertisement -spot_img

Latest article