ಅದ್ಧೂರಿಯಾಗಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ:- ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ವಿಸರ್ಜನಾ ಮೆರವಣಿಗೆ ಇಂದು ನಡೆಯಲಿದೆ. ಈ ಸಂಬಂಧ ಶಿವಮೊಗ್ಗ ನಗರದ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಹಿಂದೂ ಮಹಾಸಭಾ ಗಣೇಶನನ್ನು ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು 11ನೇ ದಿನವಾಗಿದ್ದರಿಂದ ವಿಸರ್ಜನೆ ಮಾಡಲಾಗುತ್ತದೆ. ಈ ಸಂಬಂಧ ಅದ್ಧೂರಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಯಲ್ಲಿ ಸಾಕಷ್ಟು ಜನರು ಸೇರಿ ವಿಜೃಂಭಣೆಯಿಂದ ಗಣಪತಿಯನ್ನು ವಿಸರ್ಜನೆ ಮಾಡುತ್ತಾರೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕೈಗೊಳ್ಳಲಾಗಿದೆ.
ನಗರದ ಗಾಂಧಿ ಬಜಾರ್, ಶಿವಪ್ಪ ನಾಯಕವೃತ್ತ, ಅಮೀರ್ ಅಹ್ಮದ್ ವೃತ್ತ, ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ನೆಹರು ರಸ್ತೆ, ಗೋಪಿ ವೃತ್ತ ವಿಶೇಷ ಅಲಂಕಾರದಿಂದ ಕೂಡಿವೆ. ಈ ಮೆರವಣಿಗೆಯಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸರು ಬಿಗಿಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.