No menu items!
24 C
Munich
Monday, May 4, 2026

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ !

Must read

ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದರು. ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ವಿವರಿಸಿದರು.

- Advertisement -spot_img

More articles

- Advertisement -spot_img

Latest article