ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಸುರಿದ ಕಡಿಮೆ ಮಳೆಗೆ ಧರೆಗುರುಳಿದ ಮರ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಬೃಹತ್ ಮರವೊಂದು ನೆಲಕ್ಕುರುಳಿದೆ. ರಾಜಧಾನಿ ಬೆಂಗಳೂರಿನ HMT ಲೇಔಟ್ ನಲ್ಲಿ ಬೃಹತ್ ಮರ ಧರೆಗುರುಳಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ಜರುಗಿದ್ದು, ಮರ ಬಿದ್ದ ಪರಿಣಾಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಕೂಡ ಜಖಂ ಆಗಿದೆ.
ಇನ್ನೂ ಇಲ್ಲಿನ ಸ್ಥಳೀಯರು, 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ಬಿಬಿಎಂಪಿಗೆ ದೂರು ನೀಡಿದ್ರು ಅಧಿಕಾರಿಗಳು ಮಾತ್ರ ಕ್ಯಾರೇ ಎಂದಿಲ್ಲ. ಹೀಗಾಗಿ ಅಧಿಕಾರಿಗಳ ಬೇಜವಾಬ್ದಾರಿ ತನದಿಂದಾಗಿ ಬೆಳಗ್ಗೆ ಸುರಿದ ಕಡಿಮೆ ಮಳೆಗೆ ಮರ ಧರೆಗುರುಳಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.