ಧಾರವಾಡ ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆದೇಶ ನೀಡಿದ್ದರ ಹಿಂದ ದ್ವೇಷ ರಾಜಕಾರಣ ಇಲ್ಲ. ಕೊಲೆ ಆದಾಗ ಆಗಿನ ಸಿಎಂ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ರು.ಫೋನ್ ಕದ್ದಾಲಿಕೆ, ಯೋಗೇಶ್ ಗೌಡ ಕೊಲೆ ಪ್ರಕರಣಗಳ ತನಿಖೆಗಳನ್ನು ಮಾತ್ರ ಸಿಬಿಐ ತನಿಖೆಗೆ ನೀಡಿರೋದು.ಬೇರೆ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ನೀಡಿಲ್ಲ ಎಂದ ಆರೋಗ್ಯ ಸಚಿವ ಬಿ.ಶ್ರೀರಾಮುಲು.
ಅಧಿಕಾರ ಕಳೆದುಕೊಂಡ ಹತಾಶೆಯಿಂದ ಕಾಂಗ್ರೆಸ್-ಜೆಡಿಎಸ್ ನಾಯಕರು ಹೀಗೆ ಮಾತಾಡ್ತಾ ಇದ್ದಾರೆ ಅಂತ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.