ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ!

Date:

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು. ಶುಕ್ರವಾರ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ನಾಯಕರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಧಾರವಾಡ, ಹುಬ್ಬಳ್ಳಿಯ ಕೆಲವು ನಾಯಕರು ಸಹ ಪಕ್ಷಕ್ಕೆ ಸೇರ್ಪಡೆಗೊಂಡರು.

2021ರ ಮಾರ್ಚ್‌ನಲ್ಲಿಯೇ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಈ ಕುರಿತು ಚರ್ಚೆ ನಡೆಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದ ಹಲವು ಹೋರಾಟದಲ್ಲಿ ಪಾಲ್ಗೊಂಡಿದ್ದರು

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...