ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಸಿಪಿ ಯೋಗೇಶ್ವರ್!
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ. ಇಂದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಮನೆ ಸೇರಿದರು.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮರಳಿ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.
ನಾನು ವಯನಾಡು ಕ್ಷೇತ್ರಕ್ಕೆ ಹೋಗಬೇಕಾಗಿತ್ತು. ಪ್ರಿಯಾಂಕ ಗಾಂಧಿ ಅವರು ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಹೋಗಲಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ತೆರಳಿದ್ದಾರೆ ಎಂದು ತಿಳಿಸಿದರು.