No menu items!
8 C
Munich
Wednesday, April 15, 2026

ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳು ಯಾವುವು ಗೊತ್ತಾ..?

Must read

ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳು ಯಾವುವು ಗೊತ್ತಾ..?

ಯಾವುದೇ ಭಕ್ಷ್ಯ ಪದಾರ್ಥದಲ್ಲೂ ಉಪ್ಪು ಸ್ವಲ್ಪ ಏರುಪೇರಾದರೂ ನಾಲಿಗೆ ರುಚಿಯನ್ನು ಕೆಡಿಸುತ್ತದೆ. ಆಹಾರದ ರುಚಿಗೆ ಅಲ್ಲದೆ ಮನೆಮದ್ದಾಗಿಯು ಉಪ್ಪು ಬಹಳ ಪ್ರಯೋಜನಕಾರಿ. ಹೀಗಾಗಿಯೇ ಸಾಮಾನ್ಯವಾಗಿ ಉಪ್ಪು ಎಂದಾಕ್ಷಣ ನಮಗೆ ಆಹಾರದ ರುಚಿಯನ್ನು ನೆನಪಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಹಾನಿಯುಂಟುಮಾಡುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ತಮ್ಮ ಆಹಾರದಲ್ಲಿ ಕಡಿಮೆ ಉಪ್ಪನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಅತಿಯಾದ ಉಪ್ಪು ಸೇವನೆ ಆರೋಗ್ಯಕ್ಕೆ ಹೇಗೆ ಹಾನಿಕಾರಕ ಎಂಬುದನ್ನು ತಿಳಿಯೋಣ.
ಅಧಿಕ ಉಪ್ಪು ಸೇವನೆಯಿಂದ ಬಾಧಿಸುವ ಆರೋಗ್ಯ ಸಮಸ್ಯೆಗಳು:
ರಕ್ತದೊತ್ತಡ:
ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇರಿಸುವುದರಿಂದ ವ್ಯಕ್ತಿಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಕಾಡಬಹುದು. ಅದಕ್ಕಾಗಿಯೇ ಆರೋಗ್ಯ ತಜ್ಞರು ಆಹಾರದಲ್ಲಿ ಉಪ್ಪನ್ನು ಮಿತ ಪ್ರಮಾಣದಲ್ಲಿ ಬಳಸಬೇಕೆಂದು ಸಲಹೆ ನೀಡುತ್ತಾರೆ.
ಹೃದಯದ ಆರೋಗ್ಯ:
ಅತಿಯಾದ ಉಪ್ಪು ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಹೃದಯವನ್ನು ಆರೋಗ್ಯಕರವಾಗಿಡಲು ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಮಿತಿಗೊಳಿಸಿ. ನೀವು ದಿನಕ್ಕೆ ಐದು ಗ್ರಾಂ ಗಿಂತ ಕಡಿಮೆ ಉಪ್ಪನ್ನು ಸೇವಿಸಿದರೆ, ಅದು ನಿಮ್ಮ ಹೃದಯ ಕಾಯಿಲೆ, ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಿರ್ಜಲೀಕರಣ:
ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ, ನಿರ್ಜಲೀಕರಣ ಸಮಸ್ಯೆಯನ್ನು ತಪ್ಪಿಸಲು ಆಹಾರದಲ್ಲಿ ಮಿತ ಪ್ರಮಾಣದ ಉಪ್ಪನ್ನು ಸೇರಿಸುವುದರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಿರಿ.
ಊತ:
ದೇಹದಲ್ಲಿ ಉಪ್ಪಿನ ಪ್ರಮಾಣ ಹೆಚ್ಚಾದಾಗ ದೇಹದಲ್ಲಿ ನೀರು ವಿಪರೀತವಾಗಿ ಶೇಖರಣೆಯಾಗುತ್ತದೆ.ಇದರಿಂದಾಗಿ . ಕೈ, ಕಾಲು ಮತ್ತು ಕಣಕಾಲುಗಳಲ್ಲಿ ಊತದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ನಿಮ್ಮನ್ನು ಕಾಡಬಾರದೆಂದರೆ, ಉಪ್ಪನ್ನು ಮಿತಪ್ರಮಾಣದಲ್ಲಿ ಸೇವಿಸಿ.
ಕಿಡ್ನಿ ಸಮಸ್ಯೆ:
ಅತಿಯಾದ ಉಪ್ಪು ಸೇವನೆಯು ಕಿಡ್ನಿಯನ್ನು ಹಾನಿಗೊಳಿಸಿ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು. ಉಪ್ಪಿನ ಅತಿಯಾದ ಸೇವನೆಯು ಮೂತ್ರದಲ್ಲಿ ಕ್ಯಾಲ್ಸಿಯಂ ಮಟ್ವವನ್ನು ಹೆಚ್ಚಿಸುತ್ತದೆ, ಇದು ಮೂತ್ರಪಿಂಡದ ಕಲ್ಲುಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

- Advertisement -spot_img

More articles

- Advertisement -spot_img

Latest article