ಅಧಿಕ ತೂಕದಿಂದಾಗಿ ವಿನೇಶ್ ಫೋಗಟ್ 50 ಕೆಜಿ ವಿಭಾಗದಿಂದ ಅನರ್ಹ

Date:

 

ಫೈನಲ್ ಪಂದ್ಯ ನಡೆಯೂವುದಕ್ಕೂ ಮುನ್ನವೇ ಭಾರತೀಯರಿಗೆ ಶಾಕಿಂಗ್‌ ನ್ಯೂಸ್‌ ಬಂದಿದೆ. ಮಹಿಳೆಯರ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ವಿನೇಶ್ ಫೋಗಾಟ್ರನ್ನು ಪ್ಯಾರಿಸ್ ಒಲಿಂಪಿಕ್ಸ್ ಅನರ್ಹಗೊಳಿಸಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.
ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...