No menu items!
29.6 C
Munich
Thursday, June 18, 2026

ಅನಾರೋಗ್ಯದಿಂದ ರೈತ ಹೋರಾಟಗಾರ್ತಿ ಜಯಶ್ರೀ ವಿಧಿವಶ

Must read

ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ ವಿಧಿವಶರಾಗಿದ್ದಾರೆ. ಇವರು ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡಿ ಸಂಘಟನೆ ಮಾಡಿದ್ದರು. ಇನ್ನು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುನ್ನುಡಿ ಬರೆದಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ,
ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು. ಇನ್ನೂ ಅನಾರೋಗ್ಯದಿಂದ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಗುರನ್ನವರ ಅವರು ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

- Advertisement -spot_img

More articles

- Advertisement -spot_img

Latest article