ಪೇಜಾವರಶ್ರೀ ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದರು.
ಪೇಜಾವರಶ್ರೀ ಆರೋಗ್ಯ ವಿಚಾರಣೆಗೆ ತೆರಳಿದ ಸಿಎಂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರಶ್ರೀ ಅವರ ವೈದ್ಯರೊಂದಿಗೆ ಮಾತುಕತೆ ನಡೆಸಿದರು. ನಂತರ ಸ್ವಾಮೀಜಿ ಆಪ್ತವಲಯದಿಂದ ಮಾಹಿತಿ ಪಡೆದುಕೊಂಡರು.ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ ಉಡುಪಿ ಕೃಷ್ಣ ಮಠ, ಶ್ರೀ ಅನಂತೇಶ್ವರ ಚಂದ್ರಮೌಳೀಶ್ವರ ದೇವಸ್ಥಾನ ಪೆರ್ಣಂಕಿಲ ಮಹಾಗಣಪತಿ ದೇವಸ್ಥಾನ, ಮುಚ್ಲುಕೋಡು ಸುಬ್ರಹ್ಮಣ್ಯ , ಕರಂಬಳ್ಳಿ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಗುತ್ತಿದೆ.