ತುಮಕೂರು: ತುಮಕೂರು ತಾಲೂಕಿನ ಸಂಗಾಪುರದ ಗೊಲ್ಲರಹಟ್ಟಿಯಲ್ಲಿ ಗ್ರಾಪಂ ಸದಸ್ಯೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಭಾಗ್ಯ (30) ಮೃತ ದುರ್ದೈವಿಯಾಗಿದ್ದು ಹಿರೇಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು.
ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯ ಶವ ಪತ್ತೆ ಯಾಗಿದ್ದು, ಗ್ರಾಪಂ ಸದಸ್ಯೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.