ತಮಿಳಿನ ಖ್ಯಾತ ನಟಿ ನಯನತಾರಾ ಅಭಿನಯದ ‘ಅನ್ನಪೂರ್ಣಿ’ ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಲಾಗಿದೆ. ಹೌದು ‘ಅನ್ನಪೂರ್ಣಿ’ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.
ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.
ಡಿಸೆಂಬರ್ನಲ್ಲಿ ‘ಅನ್ನಪೂರ್ಣಿ’ ಎಂಬ ಸಿನಿಮಾ ರಿಲೀಸ್ ಆಗಿತ್ತು. ಒಟಿಟಿಯಲ್ಲಿ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಚಿತ್ರದಲ್ಲಿ ನಯನತಾರಾ ತಂದೆ ಪಾತ್ರದಲ್ಲಿ ಕನ್ನಡದ ನಟ ಅಚ್ಯುತ್ ಕುಮಾರ್ ನಟಿಸಿದ್ದರು. ಅವರ ಮನೋಜ್ಞ ನಟನೆಗೆ ನಯನತಾರಾ ಮೆಚ್ಚುಗೆ ಸೂಚಿಸಿದ್ದರು.
ಅನ್ನಪೂರ್ಣಿಯನ್ನ ತೆಗೆದುಹಾಕಿದ ನೆಟ್ ಫಿಕ್ಸ್ !
Date: