ಅಪಾಯದ ಮಟ್ಟ ಮೀರಿದ ಕೊರೊನಾ ಕೇಸ್!

Date:

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಭಯಾನಕ ರೀತಿಯಲ್ಲಿ ಹಬ್ಬುತ್ತಿದೆ. ಕಳೆದ 24 ಗಂಟೆಗಳಲ್ಲಿ (ಭಾನುವಾರ) ರಾಜ್ಯಾದ್ಯಂತ ಬರೋಬ್ಬರಿ 19,067 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,61,065ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಭಾನುವಾರ 81 ಮಂದಿ ಮೃತಪಟ್ಟಿದ್ದಾರೆ. 620 ಸೋಂಕಿತರ ಪರಿಸ್ಥಿತಿ ಗಂಭೀರವಾಗಿದ್ದು, ಕೋವಿಡ್‌ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 12,793 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು 4,603 ಮಂದಿ ಗುಣವಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಇದುವರೆಗೆ 10,14,152 ಜನರು ಸಂಪೂರ್ಣವಾಗಿ ಗುಣವಾದಂತಾಗಿದೆ. ರಾಜ್ಯದಲ್ಲಿ ಈಗ 1,33,543 ಸಕ್ರಿಯ ಸೋಂಕಿತರು ಇರುವುದಾಗಿ ವರದಿ ತಿಳಿಸಿದೆ.

ಕೊರೊನಾ ಸೋಂಕಿಗೆ ಬೆಂಗಳೂರು ನಗರ ಒಂದರಲ್ಲೇ 60 ಸೋಂಕಿತರು ಮೃತಪಟ್ಟದ್ದಾರೆ. ಬಳ್ಳಾರಿಯಲ್ಲಿ ಇಬ್ಬರು, ಬೀದರ್, ಚಾಮರಾಜನಗರ, ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು, ಯಾದಗಿರಿ, ವಿಜಯಪುರ, ಉತ್ತರಕನ್ನಡ, ಕೊಪ್ಪಳ ಹಾಗೂ ಬಳ್ಳಾರಿಯಲ್ಲಿ ತಲಾ ಇಬ್ಬರು, ಮೈಸೂರು ಜಿಲ್ಲೆಯಲ್ಲಿ ಮೂವರು ಸೇರಿದಂತೆ ಒಟ್ಟು 81 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಕಿನಿಂದ ಮೃತಪಟ್ಟವರ ಸಂಖ್ಯೆ 13,351ಕ್ಕೆ ಏರಿಕೆಯಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...