No menu items!
13.7 C
Munich
Wednesday, May 20, 2026

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

Must read

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

26 ವರ್ಷದ ಲೋಕೇಶ್ ಪವನ್ ಕೃಷ್ಣ ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಮೃತ ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು. ಹೀಗಾಗಿ ಅಕ್ಕ ಗರ್ಭಿಣಿಯಾಗಿದ್ದರಿಂದ ತವರು ಮನೆಗೆ ಬಂದಿದ್ದರು. ಈ ವೇಳೆ ಲೋಕೇಶ್ ಅಕ್ಕನ ಮನೆಯ ಕೀ ತೆಗೆದುಕೊಂಡು ಅಪಾರ್ಟ್ಮೆಂಟ್‌ಗೆ ಬಂದಿದ್ದ. ಎರಡು ದಿನ ಮನೆಯಲ್ಲಿದ್ದು, ಶನಿವಾರ ಬೆಳಗಿನ ಜಾವ 3:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅನಾರೋಗ್ಯದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ಮುಗಿಸಿ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article