ಅಪ್ರಾಪ್ತೆ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ..! ಕಾಮುಕ ಅರೆಸ್ಟ್
ಮೈಸೂರು: ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯವಾಗಿ ಅಪ್ರಾಪ್ತರ ಮೇಲಿನ ದೌರ್ಜನ್ಯ, ಅತ್ಯಾಚಾರ, ಗ್ಯಾಂಗ್ ರೇಪ್ ಪ್ರಕರಣ ದಿನಬೆಳಗಾದರೆ ಜನರನ್ನು ಬೆಚ್ಚಿಬೀಳಿಸುತ್ತಿದೆ. ಆರೋಪಿಗಳಿಗೆ ಶಿಕ್ಷೆಯಾಗುತ್ತಿದ್ದರೂ ಪರಿಣಾಮಕಾರಿಯಾಗಿ ಅದು ವ್ಯಕ್ತವಾಗದ ಕಾರಣ ಇನ್ನಷ್ಟು ಅಪರಾಧಗಳು ನಡೆಯುತ್ತಲೇ ಇವೆ. ಇದೀಗ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು ಘಟನೆ ಮನ ಕಲುಕುವಂತಿದೆ.
ಹೌದು ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ ನಡೆದು ಬಾಲಕಿ ಗರ್ಭಿಣಿ ಆಗಿರುವ ಘಟನೆ ನಡೆದಿದೆ. ಇನ್ನೂ ಈ ಘಟನೆ ಸಂಬಂಧ ಕಾಮುಕ ಚಿಕ್ಕಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ ಚಿಕ್ಕಪ್ಪ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
10ನೇ ತರಗತಿ ಓದುತ್ತಿದ್ದ ಅಪ್ರಾಪ್ತೆ ಮೇಲೆ ಪಾಪಿ ಚಿಕ್ಕಪ್ಪ ಅತ್ಯಾಚಾರವೆಸಗಿದ್ದಾನೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ಕಾಮುಕ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ತಿಳಿಸಿ ಅಮಾಯಕನಂತೆ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ಪಿರಿಯಡ್ಸ್‌ನಲ್ಲಿ ವ್ಯತ್ಯಾಸ ಕಂಡುಬಂದು ಹೊಟ್ಟೆ ನೋವಿದೆ ಎಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.