ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿದ ಪ್ರಕರಣ: ಆರೋಪಿ ಸದ್ದಾಂಗೆ ಗುಂಡೇಟು

Date:

ಧಾರವಾಡ: ಹುಬ್ಬಳ್ಳಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು ಹೊಡೆಯಲಾಗಿದೆ. ಆರೋಪಿ ಸದ್ದಾಂ ಹುಸೇನ್ ಗುಂಡಿನ ದಾಳಿಗೆ ಒಳಗಾದ ಆರೋಪಿ ಎನ್ನಲಾಗಿದೆ.ಆರೋಪಿ ಸದ್ದಾಂ ಹುಸೇನ್ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನವನಗರ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ, ಆರೋಪಿ ಸದ್ದಾಂ ಹುಸೇನ್ ಪರಾರಿಯಾಗಿದ್ದನು. ಪೊಲೀಸರು ಕಾರ್ಯಾಚರಣೆ ಆರೋಪಿಯನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ಸದ್ದಾಂ ಹುಸೇನ್ ಪೊಲೀಸ್ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...