ಅಪ್ರಾಪ್ತ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರವೆಸಗಿದ್ದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣವು ಸಾಬೀತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ೨ ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಅಪರಾಧಿಗೆ ಶಿಕ್ಷೆಯನ್ನು ಕಾಯ್ದಿರಿಸಿದೆ.
ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿರುವ ಕಿಶೋರ್ ಭಯ್ಯಾ (೩೬) ಅಪರಾಧಿ. ೨೦೧೬ರಲ್ಲಿ ಪತ್ನಿ ಹೆರಿಗೆಗೆಂದು ಆಸ್ಪತ್ತೆಗೆ ದಾಖಲಾಗಿದ್ದ ಸಂದರ್ಭದಲ್ಲಿ ತನ್ನ ೧೩ ವರ್ಷದ ಪುತ್ರಿಯ ಮೇಲೆ ಅತ್ಯಾಚಾರವೆಸಗಿದ್ದ. ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣಾ ಇನ್ಸ್ಪೆಕ್ಟರ್ ಕಲಾವತಿ ಈ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಹಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಯನ್ನು ದೋಷಿ ತೀರ್ಪು ನೀಡಿದೆ.
ಅಪ್ರಾಪ್ತ ಮಗಳ ಮೇಲೆ ಅತ್ಯಾಚರವೆಸಗಿ, ತಾಯಿ ಮಾಡಿದ್ದ ಭೂಪನ ಕೃತ್ಯ ಸಾಬೀತು
Date:






