ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ಮಾತನಾಡಿದ ರೇಣುಕಾಚಾರ್ಯ, ಹಿಂದೆ ನಾನು ಅಬಕಾರಿ ಸಚಿವನಾಗಿದ್ದಾಗ ಕಳ್ಳಬಟ್ಟಿ ಮುಕ್ತ ಮಾಡಲು ಪ್ರಯತ್ನ ನಡೆಸಿದ್ದೆ. ನೀವು ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಹೇಳಿ ಸಚಿವ ಹೆಚ್. ನಾಗೇಶ್ ಅವರನ್ನು ಶಾಸಕ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಮನೆಮನೆಗೆ ಮದ್ಯ ಪೂರೈಕೆ ಕುರಿತ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ನಿಮ್ಮ ಹೇಳಿಕೆಯಿಂದ ಬಿಜೆಪಿ ಮತ್ತು ಸಿಎಂ ಘನತೆಗೆ ಧಕ್ಕೆಯಾಗುತ್ತದೆ. ಇನ್ನೊಮ್ಮೆ ಇಂತಹ ಹೇಳಿಕೆ ಕೊಡಬೇಡಿ ಎಂದು ತಿಳಿಸಿದ್ದಾರೆ.