No menu items!
15 C
Munich
Saturday, June 13, 2026

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

Must read

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಬಕಾರಿ ಇಲಾಖೆಯ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರ ಕೈಗೊಳ್ಳಬೇಕು ಎಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವಾಗಿದೆ. ಅಬಕಾರಿ ಸಚಿವರ ರಾಜೀನಾಮೆ ಪಡೆದು ಬಳಿಕ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಇದೀಗ ಅಬಕಾರಿ ಇಲಾಖೆಯವರೆಗೂ ವಿಸ್ತರಿಸಿದೆ ಎಂದು ಆರೋಪಿಸಿದರು. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಸಂಗ್ರಹಿಸಲು ಅಬಕಾರಿ ಇಲಾಖೆಯ ಮೇಲೆ ಅತಿಯಾದ ಒತ್ತಡ ಹೇರಿದ್ದು, ಗುರಿಗಳನ್ನು ಹೆಚ್ಚಿಸುವ ಮೂಲಕ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡುತ್ತಿದೆ ಎಂದು ಟೀಕಿಸಿದರು. ಮನಸೋಇಚ್ಛೆಯಂತೆ ಮದ್ಯದ ಲೈಸನ್ಸ್‌ಗಳನ್ನು ನೀಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ತಪ್ಪು ನೀತಿಯ ಪರಿಣಾಮವಾಗಿ ಪ್ರತಿ 500 ಮೀಟರ್‌ಗೆ ಒಂದು ಮದ್ಯದ ಅಂಗಡಿ ಸಿಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಯಾವುದೇ ಇಲಾಖೆಯನ್ನು ನೋಡಿದರೂ ಅತಿಯಾದ ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಅದರ ಅಧ್ಯಕ್ಷರೇ ಬಹಿರಂಗವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.

ಇತ್ತೀಚೆಗೆ ಆಡಿಯೋ ಟೇಪ್ ಬಹಿರಂಗವಾಗಿದ್ದು, ಅದರಲ್ಲಿ ಅಬಕಾರಿ ಸಚಿವ ತಿಮ್ಮಾಪುರ, ಅವರ ಪುತ್ರ ಹಾಗೂ ಮುಖ್ಯಮಂತ್ರಿಗಳ ಬಗ್ಗೆ ಉಲ್ಲೇಖವಿದೆ ಎಂದು ವಿಜಯೇಂದ್ರ ಆರೋಪಿಸಿದರು. ಅಬಕಾರಿ ಸಚಿವರು ಹಿಂದೆ ರಾಜೀನಾಮೆಗಳ ಬಗ್ಗೆ ಉದ್ದುದ್ದ ಭಾಷಣ ಮಾಡಿದ್ದರೆ, ಇದೀಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಮಡಿಕೇರಿಯ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಜಾರ್ಜ್ ಅವರು ರಾಜೀನಾಮೆ ನೀಡಬೇಕಿತ್ತು ಎಂದು ಮುಖ್ಯಮಂತ್ರಿಗಳಿಗೆ ನೆನಪಿಸಿದರು.

- Advertisement -spot_img

More articles

- Advertisement -spot_img

Latest article