ಅಭಿನಯ ಶಾರದೆ ಜಯಂತಿ ಇನ್ನಿಲ್ಲ

1
33

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಿಸುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದವರು ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು ನೀಡಿದ್ದಾರೆ.

ವಿಶೇಷ ಎಂದರೆ ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 46 ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಕೂಡ ಅವರದ್ದು. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನಿಮಾಗಳಲ್ಲಿ ಜಯಂತಿ ನಟಿಸಿ ಅಭಿಮಾನಿಗಳನ್ನು ರಂಜಿಸಿರುವ ಜಯಂತಿ ಇನ್ನು ನೆನಪು ಮಾತ್ರ.

1 COMMENT

LEAVE A REPLY

Please enter your comment!
Please enter your name here