ಅಭಿಮಾನಕ್ಕಿದು ಮಾದರಿ ಆಗದಿರಲಿ ಎಂದ ಯಶ್

Date:

ಬೆಂಗಳೂರು: ಅಂತ್ಯಕ್ರಿಯೆಯಲ್ಲಿ ಯಶ್ ಭಾಗವಹಿಸಬೇಕೆಂಬ ಕೋರಿಕೆಯೊಂದಿಗೆ ಮಂಡ್ಯ ಜಿಲ್ಲೆಯ ಕೃಷ್ಣ ಎಂಬ ಅಭಿಮಾನಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಕುರಿತಂತೆ ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಘಟನೆ ವಿಚಾರವಾಗಿ ಯಶ್, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು, ಜೀವನ, ಹೆಮ್ಮೆ. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ? ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ..
ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ…
ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ…
ಓಂ ಶಾಂತಿ… — Yash (@TheNameIsYash) February 18, 2021

ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದ ಕೃಷ್ಣ ತನ್ನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಹಾಗೂ ಯಶ್ ಭಾಗವಹಿಸಬೇಕೆಂದು ಪತ್ರ ಬರೆದಿಟ್ಟು ಆತ್ಮಹ್ಯೆಗೆ ಶರಣಾಗಿದ್ದನು. ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯರವರು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಹಾಗೂ ಯಶ್ ಟ್ವೀಟರ್ ಮೂಲಕ ಅಭಿಮಾನಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...