ಅಭಿವೃದ್ದಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗುತ್ತಿದೆ: ಎನ್. ರವಿಕುಮಾರ್
ಬೆಳಗಾವಿ: ಅಭಿವೃದ್ದಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗುತ್ತಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, 11,400 ಕೋಟಿ ರೂ. ಎಸ್ಸಿ, ಎಸ್ಟಿ ಹಣವನ್ನು ತೆಗೆಯಲಾಗಿದೆ. ಸುಮಾರು 38 ಸಾವಿರ ಕೋಟಿ ರೂ ಸರ್ಕಾರ ತೆಗೆದುಕೊಂಡಿದೆ.
ಅವರ ಅಭಿವೃದ್ದಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗುತ್ತಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಲೂಟಿ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ತುಷ್ಟಿಕರಣ ರಾಜ್ಯದಲ್ಲಿ ನಡೆಯುತ್ತಿದೆ. ವಿದೇಶಕ್ಕೆ ಓದಲು ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ 30 ಲಕ್ಷ ಹಣ ಕೊಡಲಾಗುತ್ತಿದೆ. ಹಿಂದೂಗಳಲ್ಲಿ ಬಡ ವಿದ್ಯಾರ್ಥಿಗಳಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇದೇ 16ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಎರಡನೇ ಹಂತದ ಜನಾಕ್ರೋಶ ಯಾತ್ರೆ ಬೆಳಗಾವಿಯಿಂದ ಪ್ರಾರಂಭ ಆಗುತ್ತದೆ ಎಂದು ಹೇಳಿದರು.