ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ !

Date:

ನವದೆಹಲಿ: ಬಜೆಟ್‍ʼನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್‍ ಬಗ್ಗೆ ಪ್ರತಿಕ್ರಿಯೇ ನೀಡಿದ್ದಾರೆ. ಬಜೆಟ್‍ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.
ಆದಾಯ ತೆರಿಗೆ ವಿನಾಯಿತಿಯಿಂದ ಮಧ್ಯಮ ವರ್ಗದ ಸುಮಾರು 1 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಈ ಬಜೆಟ್‍ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸಲು ಬಜೆಟ್ ಒತ್ತು ನೀಡುತ್ತದೆ. ಬಡವರಿಗೆ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಸಿಗಲಿದೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...