ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಣದಲ್ಲಿದ್ದಾರೆ. ಅವರ ಎದುರಾಳಿಯಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ.
ಪ್ರಬಲ ಸ್ಪರ್ಧೆ ಇದ್ದು ಎರಡೂ ಕಡೆಯವರ ಮಾತಿನ ಚಕಮಕಿ ತಾರಕಕ್ಕೆ ಏರುತ್ತಲೇ ಇದೆ. ಇಂದು ಸುಮಲತಾ ಅವರ ಮಗ ಅಭಿಷೇಕ್ ಅಂಬರೀಶ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ನಾನು ಕಣ್ಣಲ್ಲಿ ನೀರು ಹಾಕಿದರೆ ಟೀಕೆ ಮಾಡುತ್ತಾರೆ. ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿರುವವರು ನನ್ನ ಬಗ್ಗೆ ಮಾತನಾಡುವಷ್ಟು ದೊಡ್ಡವರಾಗಿದ್ದಾರೆ ಎಂದು ಕುಮಾರಸ್ವಾಮಿ ಅಭಿಷೇಕ್ ವಿರುದ್ಧ ಗರಂ ಆಗಿ ಮಾತನಾಡಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲದಕ್ಕಿಂತ ಹೆಚ್ಚು ಚರ್ಚೆ ಆಗುತ್ತಿರುವ ರಣಕಣ ಮಂಡ್ಯವಾಗಿದೆ. ಸಿಎಂ ಕುಮಾರಸ್ವಾಮಿ ಅವರಿಗೆ ಇದು ಪ್ರತಿಷ್ಠೆಯ ಕಣವೂ ಹೌದು. ಮಗನನ್ನು ಗೆಲ್ಲಿಸಿಕೊಳ್ಳಲೇ ಬೇಕಿದೆ.
ಅಭಿಷೇಕ್ ಅಂಬರೀಶ್ ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಏನಂದ್ರು ಗೊತ್ತಾ?
Date: